ಉಡುಪಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಷಷ್ಟ್ಯಬ್ದ ಅಭಿವಂದನ ಸಮಾರಂಭದ ಆಕರ್ಷಕ ಶೋಭಾಯಾತ್ರೆ ಅತ್ಯಂತ ವೈಭವದಿಂದ ನಡೆಯಿತು.
ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಶೋಭಾಯಾತ್ರೆಯು, ಕೋರ್ಟ್ ರೋಡ್, ಡಯಾನ ಸರ್ಕಲ್, ತ್ರಿವೇಣಿ ಸರ್ಕಲ್ ಮಾರ್ಗವಾಗಿ ಸಾಗಿ ಬಂದು ಕನಕದಾಸ ರಸ್ತೆಯ ಮೂಲಕ ಆಗಗಮಿಸಿ ರಥಬೀದಿಯಲ್ಲಿ ಮುಕ್ತಾಯಗೊಂಡಿತು.
ಚಂಡೆ, ಕೊಂಬು ಕಹಳೆ, ಕುಣಿತ ಭಜನೆ, ಕೀಲು ಕುದುರೆ, ಗೊಂಬೆ, ನಾಸಿಕ್ ಬ್ಯಾಂಡ್, ತಾಲೀಮು ತಂಡಗಳು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಮೆರವಣಿಗೆಯುದ್ದಕ್ಕೂ ವಿವಿಧ ಭಜನಾ ಮಂಡಳಿಗಳ ಸದಸ್ಯ ಪ್ರದರ್ಶಿಸಿದ ಕುಣಿತ ಭಜನೆ ಗಮನ ಸೆಳೆಯಿತು.
ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ತೆರೆದ ವಾಹನದಲ್ಲಿ ವಿಶೇಷ ರೀತಿಯಲ್ಲಿ ಅಲಂಕರಿಸಿದ ಮಂಟಪದಲ್ಲಿ ಕುಳ್ಳಿರಿಸಿಕೊಂಡು ಮೆರವಣಿಗೆ ಮೂಲಕ ರಥಬೀದಿಗೆ ಕರೆತರಲಾಯಿತು.
ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಶಾಸಕ ಕೆ.ರಘುಪತಿ ಭಟ್, ಮುಖಂಡರಾದ ನಯನಾ ಗಣೇಶ್, ವೀಣಾ ಶೆಟ್ಟಿ, ಸುಪ್ರಸಾದ್ ಶೆಟ್ಟಿ ಬೈಕಾಡಿ, ತಲ್ಲೂರು ಶಿವರಾಮ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ರಂಜನ್ ಕಲ್ಕೂರ, ವಿಜಯ ಕೊಡವೂರು, ಶ್ಯಾಮಲ ಕುಂದರ್ ಮೊದಲಾದವರು ಪಾಲ್ಗೊಂಡಿದ್ದರು.