Monday, November 25, 2024

ಕೋವಿಡ್ 19 ಹೆಚ್ಚಳ: ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

Must read

ಬೆಂಗಳೂರು: ಕೇರಳದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಸರಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ:

  1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದೇ ಇರುವುದು ಸೂಕ್ತವಾಗಿದೆ.
  2. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.
  3. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.
  4. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ
  5. ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ, ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.
spot_img

More articles

LEAVE A REPLY

Please enter your comment!
Please enter your name here