Friday, September 20, 2024

ಕುತ್ಯಾರು: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ನೋಂದಣಿಗೆ ಚಾಲನೆ

Must read

ಉಡುಪಿ: ಕುತ್ಯಾರು ಗ್ರಾಮ ಪಂಚಾಯತ್ ಬಳಿ ಇಂದು ಹಮ್ಮಿಕೊಳ್ಳಲಾದ “ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ನೋಂದಣಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.


ಬಳಿಕ ಮಾತನಾಡಿ ಶಾಸಕರು, ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಒಂದು. ಈ ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಕೂಡ ಯಾವುದೇ ಹಂಗಿಲ್ಲದೆ ಬದುಕಬೇಕು. ದುಡಿಯುವ ಕೈಗಳಿಗೆ ಒಂದಷ್ಟು ಕೆಲಸ ನೀಡಬೇಕು ಎಂಬ ಯೋಚನೆ ಇಟ್ಟುಕೊಂಡು ಜಾರಿಗೆ ತಂದಿರುವ ಯೋಜನೆ ಇದಾಗಿದೆ. ಅರ್ಹರು ಇದರ ಸದುಪಯೋಗ ಪಡೆಯಬೇಕು ಎಂದರು.


ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ಧನ ಆಚಾರ್ಯ, ಉಪಾಧ್ಯಕ್ಷೆ ಭಾರತಿ ರಾಘವೇಂದ್ರ ಹಾಗೂ ಸದಸ್ಯರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here