Friday, September 20, 2024

ಉಡುಪಿ ಜಿಲ್ಲಾ ಬಿಜೆಪಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ

Must read

ಉಡುಪಿ: ಅಜಾತಶತ್ರು ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಛೇರಿಯಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಿ. ಶೆಟ್ಟಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠದ ಸಂಚಾಲಕ ಪಾಂಡುರಂಗ ಲಾಗ್ವಂಕರ್, ಪ್ರಮುಖರಾದ ಸುಭಾಷಿತ್ ಕುಮಾರ್, ಚಿನ್ಮಯ್, ಶಾಂತಿ ಮನೋಜ್, ಶಶಿಕಲಾ, ಅಶ್ವಿನಿ ಶೆಟ್ಟಿ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

spot_img

More articles

LEAVE A REPLY

Please enter your comment!
Please enter your name here