ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖಾ ಸಮಿತಿಯನ್ನು ರಚಿಸಲಾಗಿದೆ.
ಈ ಸಮಿತಿಯಲ್ಲಿ ಜಿಪಂ ಉಪಕಾರ್ಯದರ್ಶಿ, ತೆರಿಗೆ ಇಲಾಖೆ ಅಧಿಕಾರಿ, ಎಸಿ, ಇಂಜಿನಿಯರ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕರು ಇರಲಿದ್ದಾರೆ. ಈ ಸಮಿತಿಯು ತನಿಖೆ ನಡೆಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಿದೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಸಕ್ಕರೆ ಕಾರ್ಖಾನೆ ಅವ್ಯವಹಾರಕ್ಕೆ ಸಂಬಂಧಿಸಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಕ್ಕರೆ ಆಯುಕ್ತರು ನಿರ್ದೇಶನ ನೀಡಿದ್ದು, ಅದರಂತೆ ಸಮಿತಿಯನ್ನು ರಚನೆ ಮಾಡಲಾಗಿದೆ. ಪ್ರಕರಣದ ಕುರಿತು ಇನ್ನೊಂದು ಕಡೆ ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ. ಅದರ ಜೊತೆಗೆ ಸಮಿತಿಯು ತನಿಖೆ ನಡೆಸಿ ವರದಿಯನ್ನು ಸಲ್ಲಿಸಲಿದೆ ಎಂದರು.