Sunday, November 24, 2024

ಉಡುಪಿ: ಪರ್ಯಾಯ ಮಹೋತ್ಸವಕ್ಕೆ ತಡೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

Must read

ಬೆಂಗಳೂರು: ಉಡುಪಿ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ.


ಈ ಬಾರಿ ಪುತ್ತಿಗೆ ಶ್ರೀಗಳು ಪರ್ಯಾಯ ಪೀಠಾರೋಹಣ ಮಾಡಲಿದ್ದು, ಅವರು ಸಮುದ್ರೋಲ್ಲಂಘನೆ ಮಾಡಿ ವಿದೇಶಕ್ಕೆ ಪ್ರಯಾಣಿಸಿ ಸಂಪ್ರದಾಯ ಉಲ್ಲಂಘಿಸಿದ್ದಾರೆ. ಈ ಕಾರಣಕ್ಕಾಗಿ ಅವರಿಗೆ ಪರ್ಯಾಯ ನೀಡದಂತೆ ಕೋರಿ ಗುರುರಾಜ ಜೀವನರಾವ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.


ಅರ್ಜಿಯ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ರಿದ್ದ ಪೀಠ, ವಿದೇಶದಲ್ಲಿ ಜ್ಞಾನ ಪ್ರಸಾರ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದೆ.
2008ರಲ್ಲಿ ಕೂಡ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಅಷ್ಟ ಮಠಗಳ ಪೈಕಿ ಆರು ಮಠಗಳ ಮಠಾಧೀಶರು ಪರ್ಯಾಯದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ, ಶೀರೂರು ಶ್ರೀಗಳು ಮಾತ್ರ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ಬೆಂಬಲ ಸೂಚಿಸಿದ್ದರು.


ಈ ಬಾರಿ ಇದೀಗ ಮತ್ತೆ ಪರ್ಯಾಯ ಮಹೋತ್ಸವಕ್ಕೆ ಭಿನ್ನಮತದ ಅಪಸ್ವರ ಕೇಳಿಬರಲಾರಂಭಿಸಿದೆ. ಪರ್ಯಾಯ ಉತ್ಸವದಿಂದ ಇತರೆ ಮಠಾಧೀಶರು ಅಂತರ ಕಾಯ್ದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.


ಜನವರಿ 17, 18ರಂದು ಪರ್ಯಾಯ ಮಹೋತ್ಸವ ನೆರವೇರಲಿದ್ದು, ಈ ವೇಳೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಬಹುತೇಕ ಗೈರಾಗಲಿದ್ದಾರೆ. ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣ ಪ್ರತಿಷ್ಠೆ ನಡೆಯಲಿರುವ ಕಾರಣ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಟ್ರಸ್ಟಿಯೂ ಆಗಿರುವ ಅವರು ಜನವರಿ 17ರಂದೇ ಅಯೋಧ್ಯೆಗೆ ತೆರಳಲಿದ್ದಾರೆ.

spot_img

More articles

LEAVE A REPLY

Please enter your comment!
Please enter your name here