ಮಡಿಕೇರಿ: ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ʼಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ಇನ್ನು ಮುಂದೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.