Friday, September 20, 2024

ಉಡುಪಿ ಪರ್ಯಾಯೋತ್ಸವ; ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರ ವೈಭವದ ಪುರಪ್ರವೇಶ

Must read

ಉಡುಪಿ: ಚತುರ್ಥ ಬಾರಿಗೆ ಪರ್ಯಾಯ ಪೀಠಾರೋಹಣ ಏರಲಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಪುರಪ್ರವೇಶ ಇಂದು ವೈಭವದಿಂದ ನಡೆಯಿತು.


ಜೋಡುಕಟ್ಟೆಯಿಂದ ಆರಂಭಗೊಂಡ ಮೆರವಣಿಗೆಯು ಹಳೆ ಡಯಾನ, ಕೆಎಂ ಮಾರ್ಗ, ತ್ರಿವೇಣಿ ಸರ್ಕಲ್, ಸಂಸ್ಕೃತ ಕಾಲೇಜು ಮೂಲಕ ಮುಖ್ಯ ರಸ್ತೆಯಲ್ಲಿ ಪುತ್ತಿಗೆ ಮಠಕ್ಕೆ ಸಾಗಿ ಬಂತು. ಸುಗುಣೇಂದ್ರ ಶ್ರೀಪಾದರು ಮತ್ತು ಕಿರಿಯ ಯತಿಗಳಾದ ಸುಶ್ರೀಂದ್ರ ಶ್ರೀಪಾದರನ್ನು ಅಲಂಕೃತ ತೆರೆದ ವಾಹನದಲ್ಲಿ‌ ಕರೆತರಲಾಯಿತು.


ಮೆರವಣಿಗೆಯುದ್ದಕ್ಕೂ ನೂರಾರು ಕಲಾತಂಡಗಳು ಸಾಂಸ್ಕೃತಿಕ ತಂಡಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿತು. ಹುಲಿವೇಷ, ಚೆಂಡೆ ಬಳಗ, ಬಣ್ಣದ ಕೊಡೆಗಳು, ಕೊಂಬು ಕಹಳೆ, ಸ್ಕೌಟ್ಸ್ ಶಾಲಾ ವಿದ್ಯಾರ್ಥಿಗಳು, ನಾಸಿಕ್ ಬ್ಯಾಂಡ್, ಕೀಲು ಕುದುರೆ, ವಾದ್ಯ, ಹತ್ತಾರು ಭಜನಾ ತಂಡಗಳು, ನೂರಾರು ಕಲಾ ತಂಡಗಳು ಮೆರವಣಿಗೆಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿತು. ಸಾವಿರಾರು ಮಂದಿ ಮೆರವಣಿಗೆಗೆ ಸಾಕ್ಷಿಯಾದರು.

ಮೆರವಣಿಗೆಯಲ್ಲಿ ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಎಚ್. ಎಸ್. ಬಲ್ಲಾಳ್, ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪರ್ಯಾಯ ಸಮಿತಿಯ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್, ಶಾಸಕ ಯಶ್ಪಾಲ್ ಸುವರ್ಣ, ಕೆ.ಉದಯ ಕುಮಾರ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್ , ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಭುವನೇಂದ್ರ ಕಿದಿಯೂರು, ಪುರುಷೋತ್ತಮ ಶೆಟ್ಟಿ, ಅಜಯ್ ಪಿ. ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ ವಿವಿಧ ಸಮುದಾಯದ ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

spot_img

More articles

LEAVE A REPLY

Please enter your comment!
Please enter your name here