Sunday, November 24, 2024

ಎಟಿಎಂ ಕಾರ್ಡ್ ಬದಲಾಯಿಸಿ ವಂಚನೆ: ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Must read

ಬೈಂದೂರು: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿದಂತೆ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹರಿಯಾಣ ರಾಜ್ಯ ಬರ್ಸಿ ಜಟಾನ್‌ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳು. ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್‌ನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್‌ಡ್ರಾ ಮಾಡಲು ಸಹಕಾರ ಮಾಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್ ನೀಡಿ ಮೂರು ಕಡೆ ಒಟ್ಟು 2 ಲಕ್ಷದ 26 ಸಾವಿರ ಹಣ ಎಗರಿಸಿದ್ದರು.

ಈ ಕುರಿತು ಮೂರು ಪ್ರತ್ಯೇಕ ಪ್ರಕರಣಗಳು ಬೈಂದೂರು ಠಾಣೆಯಲ್ಲಿ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕುಂದಾಪುರದಲ್ಲಿ ಬುಧವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here