Friday, September 20, 2024

ಜ.26ರಂದು ಬಡಗಬೆಟ್ಟು ಸೊಸೈಟಿಯ ಕಾರ್ಕಳ ಶಾಖೆ ಉದ್ಘಾಟನೆ

Must read

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 11ನೇ ಸಂಪೂರ್ಣ ಹವಾನಿಯಂತ್ರಿತ ಕಾರ್ಕಳ ಶಾಖೆಯು ಜ.26ರಂದು ಕಾರ್ಕಳದ ಅನಂತಶಯನ ರಸ್ತೆ ವಿಕಾಸ ಟವರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.

ನೂತನ ಶಾಖೆಯನ್ನು ಸಂಜೆ 4ಗಂಟೆಗೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಜೈನ ಮಠ ಮೂಡುಬಿದ್ರೆ ಸ್ವಸ್ತಿ ಶ್ರೀಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಆಶಿರ್ವಚನ ನೀಡಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಜಿಲ್ಲಾಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here