ಉಡುಪಿ: ಪಾರ್ಟ್‌ಟೈಮ್ ಜಾಮ್ ನಲ್ಲಿ ಹೆಚ್ಚಿನ ಲಾಭಾಂಶ ಪಡೆಯಬಹುದೆಂಬ ಆಸೆಗೆ ಬಿದ್ದ ಯುವಕನೋರ್ವ ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಘಟನೆ ಮಣಿಪಾಲದ ಪರ್ಕಳದಲ್ಲಿ ನಡೆದಿದೆ.
ಪರ್ಕಳದ ಯತಿರಾಜ್ ಎಂಬವರಿಗೆ ಟೆಲಿಗ್ರಾಂ ಆ್ಯಪ್‌ನಲ್ಲಿ ಪಾರ್ಟ್ ಟೈಮ್ ಜಾಬ್ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಮೊಬೈಲ್ ನಂಬರ್ ಗೆ ಸಂಪರ್ಕಿಸಿದಾಗ ಇವರಿಗೆ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿದ ಆರೋಪಿಗಳು ಬ್ಯಾಂಕ್ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ.
ಅದರಂತೆ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಡಿ.7ರಿಂದ ಜ.9ರ ಮಧ್ಯಾವಧಿಯಲ್ಲಿ ಹಂತ ಹಂತವಾಗಿ ಒಟ್ಟು 43,43,596ರೂ. ಹಣವನ್ನು ಪಾವತಿಸಿದ್ದರು. ಆದರೆ ಯತಿರಾಜ್‌ಗೆ ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನು ನೀಡದೇ ನಂಬಿಸಿ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.