ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಇಂದು ಸಂಸದರ ಕಚೇರಿ ಚಲೋ ಹೋರಾಟ ನಡೆಸಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಧರಣಿಯಲ್ಲಿ ಹಂಚು ಕಾರ್ಮಿಕರು, ಬೀಡಿ ಕಾರ್ಮಿಕರು, ಜನರಲ್ ವರ್ಕಸ್ ಕಾರ್ಮಿಕರು, ಕೆಲಸಗಾರ ಸಂಘದ ಕಾರ್ಮಿಕರು ಭಾಗವಹಿಸಿದ್ದರು. ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ಧೋರಣೆ ವಿರುದ್ಧ ಕಾರ್ಮಿಕರು ಆಕ್ರೋಶ ಹೊರಹಾಕಿದರು.
ಧರಣಿ ಬಳಿಕ ಸಂಸದರ ಆಪ್ತ ಕಾರ್ಯದರ್ಶಿಗೆ ಮನವಿ ನೀಡಲಾಯಿತು.
ಪ್ರತಿಭಟನೆಯಲ್ಲಿ ಹಂಚು ಕಾರ್ಮಿಕ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್. ನರಸಿಂಹ, ಮುಖಂಡರಾದ ಜಿ.ಡಿ.ಪಂಜು, ಬೀಡಿ ಸಂಘದ ಮುಖಂಡರಾದ ಉಮೇಶ್ ಕುಂದರ್, ನಳಿನಿ, ಬಲ್ಕಿಸ್ ಬಾನು, ಜನರಲ್ ವರ್ಕ್ಸ್ ಯೂನಿಯನ್ ಅಧ್ಯಕ್ಷ ಶಶಿಧರ ಗೊಲ್ಲ, ಕಾರ್ಯದರ್ಶಿ ರಮೇಶ್ ಶೇರಿಗಾರ, ಸಿಐಟಿಯು ಜಿಲ್ಲಾ ಅಧ್ಯಕ್ಷ ಕೆ.ಶಂಕರ್, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಕಲ್ಲಾಗಾರ್, ಕಾರ್ಕಳ ತಾಲೂಕು ಬೀಡಿ ಸಂಘದ ಕಾರ್ಯದರ್ಶಿ ಕವಿರಾಜ್. ಎಸ್, ಕುಂದಾಪುರದ ಕೆಲಸಗಾರರ ಸಂಘದ ಮುಖಂಡರಾದ ಗಿರಿಜಾ ಆಚಾರ್ತಿ, ಗಿರಿಜಾ ಶೆಟ್ಟಿ ಮುಖಂಡರಾದ ಮೋಹನ್ ಉಪಸ್ಥಿತರಿದ್ದರು.