Friday, September 20, 2024

ಮಲ್ಪೆ: ಭೀಕರ ಅಪಘಾತ; ಓರ್ವ ಮೃತ್ಯು, ಮತ್ತೋರ್ವ ಗಂಭೀರ

Must read

ಉಡುಪಿ: ದ್ವಿಚಕ್ರ ವಾಹನವೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ರಸ್ತೆಯ ಪಂದುಬೆಟ್ಟು ಶುಕ್ರವಾರ ರಾತ್ರಿ ನಡೆದಿದೆ.

ಮೃತ ಸವಾರನನ್ನು ಮೋಕಿಮ್ ಅನ್ಸಾರಿ ಎಂದು ಗುರುತಿಸಲಾಗಿದೆ. ಸಹಸವಾರ ಮುಶರಫ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.

ನಿನ್ನೆ ರಾತ್ರಿ ಮೋಕಿಮ್ ಅವರು ಸ್ಕೂಟರ್ ನಲ್ಲಿ ಮುಶರಫ್ ಅವರನ್ನು ಸಹಸವಾರನನ್ನಾಗಿ ಕುರಿಸಿಕೊಂಡು ಮಲ್ಪೆಯಿಂದ ಉಡುಪಿ ಕಡೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಕರಾವಳಿ ಜಂಕ್ಷನ್ ನಿಂದ ಮಲ್ಪೆ ಕಡೆಗೆ ಹೋಗುತ್ತಿದ್ದ ಬಸ್ ಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಮೋಕಿಮ್ ಅನ್ಸಾರಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಹ ಸವಾರ ಮುಶರಫ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

spot_img

More articles

LEAVE A REPLY

Please enter your comment!
Please enter your name here