ಮಂಗಳೂರು: ಜೂಜು ಕಟ್ಟಿ ಕೋಳಿ ಅಂಕ ನಡೆಸುವುದು ಕಾನೂನುಬಾಹಿರ, ಇದು ಅಪರಾಧವಾಗಿದೆ. ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ. ಆದ್ದರಿಂದ, ಕೋಳಿ ಅಂಕ ನಡೆಸಲು ಅನುಮತಿ ಪಡೆಯಲು ಠಾಣೆಗೆ ಬರಬೇಡಿ ಎಂದು ದ.ಕ.ಜಿಲ್ಲಾ ಎಸ್ಪಿ ರಿಷ್ಯಂತ್ ಹೇಳಿದ್ದಾರೆ.
ಜೂಜು ಕಟ್ಟಿ ನಡೆಸುವ ಕೋಳಿ ಅಂಕಕ್ಕೆ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ, ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.