Thursday, September 19, 2024

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜೀನಾಮೆ: ನೂತನ ಸಿಎಂ ಆಗಿ ಚಂಪೈ ಸೊರೇನ್ ಆಯ್ಕೆ

Must read

ಜಾರ್ಖಂಡ್‌: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ತಮ್ಮ ಸ್ಥಾನಕ್ಕೆ ಇಂದು ಸಂಜೆ ರಾಜೀನಾಮೆ ನೀಡಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೆ ಜೆಎಂಎಂ ಪಕ್ಷದ ಹಿರಿಯ ನಾಯಕ ಚಂಪೈ ಸೊರೇನ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ.
ಭೂಮಿಯ ಮಾಲೀಕತ್ವದ ಬದಲಾವಣೆ ವಹಿವಾಟು ಹಿಂದೆ ದೊಡ್ಡ ಮಾಫಿಯಾ ಇದ್ದು, ಹಲವು ಅಕ್ರಮಗಳು ನಡೆದಿವೆ ಎಂಬ ಆರೋಪ ಕುರಿತಂತೆ ತನಿಖೆ ನಡೆಯುತ್ತಿದೆ.

ಈ ಹಗರಣದ ಸಂಬಂಧ ಇ.ಡಿ ಅಧಿಕಾರಿಗಳು ಸದ್ಯ 2011ನೇ ತಂಡದ ಐಎಎಸ್ ಅಧಿಕಾರಿ ಛಾವಿ ರಂಜನ್, ಜಾರ್ಖಂಡ್‌ನ ಕಂದಾಯ ಇಲಾಖೆಯ ಸಿಬ್ಬಂದಿ ಭಾನುಪ್ರಸಾದ್ ಪ್ರಸಾದ್ ಸೇರಿ 14 ಜನರನ್ನು ಬಂಧಿಸಿದ್ದಾರೆ. ಬಂಧಿತ ಐಎಎಸ್ ಅಧಿಕಾರಿ ರಾಂಚಿಯಲ್ಲಿ ಜಿಲ್ಲಾಧಿಕಾರಿಯಾಗಿ, ರಾಜ್ಯ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು

spot_img

More articles

LEAVE A REPLY

Please enter your comment!
Please enter your name here