ಉಡುಪಿ: ಲೋಕಸಭೆ ಎಲೆಕ್ಷನ್ ಬಳಿಕ ರಾಜ್ಯದಲ್ಲಿ ಏಕ ಕಾಲದಲ್ಲಿ ಖಾಲಿ ಇರುವ ಲೈನ್ ಮ್ಯಾನ್ ಗಳ ಹುದ್ದೆ ಬರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಸಂಕೀರ್ಣದ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮೆಸ್ಕಾಂ ಹಾಗೂ ಕೆ. ಪಿ.ಟಿ.ಸಿ.ಎಲ್ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಈಗಾಗಲೇ ರಾಜ್ಯದಲ್ಲಿ ಲೈನ್ ಮ್ಯಾನ್ ಗಳ ಕೊರತೆ ಇದೆ. ಅದಕ್ಕಾಗಿ ಏಕ ಕಾಲದಲ್ಲಿ ಲೈನ್ ಮ್ಯಾನ್ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಅದಕ್ಕೂ ಮೊದಲು ಜಿಲ್ಲೆಯಾದ್ಯಂತ ತರಬೇತಿ ನೀಡುವ ಕಾರ್ಯ ನಡೆಯಲಿದೆ ಎಂದರು.
ಅಧಿಕಾರಗಳ ನಡುವೆ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ. ಕೆಲವರಿಗೆ ಮಾಹಿತಿಯೇ ಇಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಬಳಿ ತೆರಳಿ ಅವರ ಬೆಡಿಕೆ ಹಾಗೂ ಕ್ಷೇತ್ರದಲ್ಲಾಗುತ್ತಿರುವ ಸಮಸ್ಯೆಯ ಕುರಿತು ಮಾತನಾಡಿ ಅದಕ್ಕೆ ಸೂಕ್ತವಾಗಿ ಸ್ಪಂದಿಸಬೇಕು. ಬಡವರು ನಿಮ್ಮ ಬಳಿ ಬಾರದೇ ನೀವೇ ಅವರ ಬಳಿ ಹೋಗಿ, ಸಮಸ್ಯೆ ಕುರಿತು ಪಟ್ಟಿ ಮಾಡಿ ಅವರಿಗೆ ಸೂಕ್ತವಾಗಿ ಸ್ಪಂದಿಸಿ ಎಂದು ಸೂಚನೆ ನೀಡಿದರು.
ಶಾಸಕ ಯಶಪಾಲ್ ಸುವರ್ಣ ಅವರು ಮಾತನಾಡಿ, ಬ್ರಹ್ಮಾವರದ ಐದು ವಿದ್ಯುತ್ ಉಪ ವಿಭಾಗಕ್ಕೆ 20ಲಕ್ಷದಂತೆ ನಿರ್ವಹಣಾ ವೆಚ್ಚ ಸರಕಾರದಿಂದ ಬರುತ್ತಿದ್ದು, ಇದನ್ನು ಒಂದು ಕೋಟಿಗೆ ಹೆಚ್ಚಿಸಬೇಕು. ಮುಂದಿನ ತಿಂಗಳಿನಿಂದ ಪರೀಕ್ಷೆಗಳು ಆರಂಭಗೊಳ್ಳಲಿದೆ. ಹೀಗಾಗಿ ಸರಕಾರ ಪವರ್ ಕಟ್ ಮಾಡಬಾರದು. ಮನೆ ಮೇಲೆ ಸೋಲಾರ್ ಅಳವಡಿಕೆಗೆ ಈಗ ಇರುವ ಮಾನದಂಡವನ್ನು ಸಡಿಲೀಕರಣ ಮಾಡಬೇಕು ಎಂದು ಒತ್ತಾಯಿಸಿದರು.
ಬಳಿಕ ಈ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಆಗ್ ಭಾಗದ ಸಮಸ್ಯೆಯ ಬಗ್ಗೆ ಸಚಿವರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಮೆಸ್ಕಾಂ ಎಂಡಿ ಪದ್ಮಾವರಿ, ಕೆ.ಪಿ.ಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ,ಸಿ.ಇ.ಒ ಪ್ರತೀಕ್ ಬಾಯಲ್ ಮುಂತಾದವರು ಉಪಸ್ಥಿತರಿದ್ದರು.