ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು( ಕೆಇಆರ್‌ಸಿ) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ಗೆ 40 ಪೈಸೆ ಕಡಿತ ಮಾಡಲಾಗಿದ್ದು, 100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್ 1ರಿಂದಲೇ ಅನ್ವಯವಾಗಲಿದೆ.