Sunday, November 24, 2024

ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

Must read

ಉಡುಪಿ: ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ಇಳಿಕೆ ಮಾಡುವುದಾಗಿ ಘೋಷಣೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿ ಸುದ್ದಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಅವರು ‘ಇಂದು ಅಂತಾರಾಷ್ಟ್ರೀಯ ಮಹಿಳಾ ದಿನ, ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವಲ್ಲಿ ಹೆಚ್ಚಿನ ಪಾತ್ರ ವಹಿಸಲಿದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here