Thursday, September 19, 2024

ಶಿರ್ವ: ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

Must read

ಉಡುಪಿ: ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ಭಾನುವಾರ ರಾತ್ರಿ ಸಂಭವಿಸಿದೆ.

ಗಾಯಗೊಂಡವರನ್ನು ಬಿಹಾರ ಮೂಲದ ಕಾರ್ಮಿಕ ಸುರೇಂದ್ರ(55) ಎಂದು ಗುರುತಿಸಲಾಗಿದೆ. ಮರಳುಗಾರಿಕೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ಇವರು, ಕಲ್ಲೊಟ್ಟು ಸಂತೋಷ್ ಪೂಜಾರಿ ಅವರ ಮನೆಯ ಜಗಲಿಯಲ್ಲಿ ರಾತ್ರಿ ಮಲಗಿದ್ದ ವೇಳೆ ಚಿರತೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ ಎನ್ನಲಾಗಿದೆ.

ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಚಿರತೆ ಸೆರೆ ಹಿಡಿಯಲು ಬೋನು ಇಡುವ ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

spot_img

More articles

LEAVE A REPLY

Please enter your comment!
Please enter your name here