ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಇಂದು (ಜುಲೈ 5) ರಜೆ ಘೋಷಣೆ ಮಾಡಲಾಗಿದೆ.
ಭಾರೀ ಗಾಳಿಮಳೆಗೆ ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣ ಜಿಲ್ಲಾಧಿಕಾರಿಗಳ ಸೂಚನೆಯಂತೆ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ರಜೆ ಘೋಷಿಸಿ ಆದೇಶ