Saturday, October 19, 2024

ಉಡುಪಿಯಲ್ಲಿ ಧಾರಾಕಾರ ಮಳೆ: ಹಲವು ಮನೆಗಳು ಜಲಾವೃತ

Must read

ಉಡುಪಿ: ಎರಡು ದಿನಗಳಿಂದ ಸುರಿಯುತ್ತಿರುವ ರಣಮಳೆಗೆ ಉಡುಪಿ ನಗರ ತತ್ತರಿಸಿ ಹೋಗಿದೆ. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ಉಡುಪಿಯ ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿವೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಬೈಲು ಭಾಗದಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿದೆ.
ಕರಂಬಳ್ಳಿ ವೆಂಕಟರಮಣ ಲೇಔಟ್‌ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ.

ಭಾರಿ ಮಳೆಯಿಂದ ನಗರದಲ್ಲಿನ ಮಳೆನೀರು ತೋಡು ತುಂಬಿ ಹರಿಯುತ್ತಿದ್ದು, ಇದರಿಂದ ಈ ಪರಿಸರದ ಹತ್ತಾರು ಮನೆಗಳು ಜಲಾವೃತಗೊಳ್ಳುವ ಆತಂಕ ಎದುರಾಗಿದೆ. ಹಲವೆಡೆ ಮಕ್ಕಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕೂಡ ಜಲಾವೃತ ಗೊಂಡಿರುವುದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿದೆ.

spot_img

More articles

LEAVE A REPLY

Please enter your comment!
Please enter your name here