Friday, October 18, 2024

ಕಾಪು: ಕಾರಿಗೆ ಬೈಕ್ ಡಿಕ್ಕಿ; ಯುವಕ ಸ್ಥಳದಲ್ಲೇ ಮೃತ್ಯು

Must read

ಉಡುಪಿ: ಬೈಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಕೊಪ್ಪಲಂಗಡಿಯಲ್ಲಿ ಇಂದು ಸಂಜೆ ನಡೆದಿದೆ.

ಮೃತಪಟ್ಟ ಬೈಕ್‌ ಸವಾರ ತಮಿಳುನಾಡು ಮೂಲದ ಯುವಕನೆಂದು ಗುರುತಿಸಲಾಗಿದೆ‌. ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್, ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕಾರಗೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿದ್ದ ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಸ್ಥಳಕ್ಕೆ ಕಾಪು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here