ಉಡುಪಿ: ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸಿದ ಘಟನೆ ಸಂಬಂಧಿಸಿ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರಕಾಶ್ ಸಾಲಿಯಾನ್ ಅವರು ಅಂಬಲಪಾಡಿ ಗ್ರಾಮದ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿ-66 ನೇ ಬಳಿ ಇರುವ ಕಾರ್ ಕ್ಯಾರ್ ಸರ್ವಿಸ್ ಸೆಂಟರ್ ಸ್ವಲ್ಪ ಮುಂದೆ ಸಿಬ್ಬಂದಿಯವರೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಕಿನ್ನಿಮುಲ್ಕಿ ಸ್ವಾಗತ ಗೋಫುರದ ಕಡೆಯಿಂದ ಬಲಾಯಿಪಾದೆ ಕಡೆಗೆ ಆರೋಪಿ ಆಶ್ರಿತ್ ಎಂಬಾತನು ತಾನು ಚಲಾಯಿಸುತ್ತಿದ್ದ KA-20-AB-4244 ನೇ ಬಸ್ಸನ್ನು ರಾಷ್ಟ್ರೀಯ ಹೆದ್ದಾರಿ-66 ನೇ ಸಾರ್ವಜನಿಕ ರಸ್ತೆಯಲ್ಲಿ ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದಾನೆ.
ಅಂತೆಯೇ ಎರಡನೇ ಪ್ರಕರಣದಲ್ಲಿ ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಶೇಖರ ಅವರು ಪುತ್ತೂರು ಕಾಂಚನ ಹುಂಡೈ ಶೋರೂಮ್ ಬಳಿ ಸಿಬ್ಬಂದಿಯೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದಾಗ ನಿಟ್ಟೂರು ಕಡೆಯಿಂದ ಕರಾವಳಿ ಕಡೆಗೆ ಆರೋಪಿ ರಜತ್ ಎಂಬಾತನು ತಾನು ಚಲಾಯಿಸುತ್ತಿದ್ದ KA-20-D-729 ನೇ ಬಸ್ಸನ್ನು ರಾಷ್ಟ್ರೀಯ ಹೆದ್ದಾರಿ-66 ನೇ ಸಾರ್ವಜನಿಕ ರಸ್ತೆಯಲ್ಲಿ ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ಸನ್ನು ಚಲಾಯಿಸಿದ್ದಾನೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆ ಅಪರಾಧ ಪ್ರಕರಣ ದಾಖಲಾಗಿದೆ.