Friday, September 20, 2024

ಮಲ್ಪೆ: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ; ನಿವೃತ್ತ ಮುಖ್ಯೋಪಾಧ್ಯಾಯ ಸ್ಥಳದಲ್ಲೇ ಮೃತ್ಯು

Must read

ಉಡುಪಿ: ಖಾಸಗಿ ಬಸ್ ವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಮುಖ್ಯೋಪಾಧ್ಯಾಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆ ಕಲ್ಮಾಡಿಯಲ್ಲಿ ಇಂದು ನಡೆದಿದೆ.

ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ. ಅವರು ಇಂದು ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ಆದಿಆಡುಪಿಯಿಂದ ಮಲ್ಪೆ ಕಡೆ ಹೋಗುತ್ತಿದ್ದರು. ಕಲ್ಮಾಡಿಗೆ ತಲುಪುತ್ತಿದ್ದಂತೆ ಬ್ರೇಕ್ ಫೈಲ್ ಆದ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಹಿಂಬದಿಯ ಚಕ್ರಕ್ಕೆ ಸಿಲುಕಿದ ಭಾಸ್ಕರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

spot_img

More articles

LEAVE A REPLY

Please enter your comment!
Please enter your name here