Sunday, November 24, 2024

ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ: ಡಿಸಿ ಡಾ. ವಿದ್ಯಾಕುಮಾರಿ

Must read

ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್ ಗೆ ಲಿಂಕ್ ಮಾಡುವ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದ್ದು , ಜಿಲ್ಲೆಯಲ್ಲಿ ಈವರೆಗೆ ಶೇ. 65ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ ಎಂದು‌ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.

ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್ ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದ ನಿರ್ದೇಶನವಿದೆ. ಜಿಲ್ಲೆಯ ಕೆಲವೊಂದು ನಾಗರೀಕರು ಆಧಾರ್ ಲಿಂಕ್ ಮಾಡಲು ಹಿಂಜರಿಯುತ್ತಿದ್ದು ಇದರಿಂದ ನಿಗಧಿತ ಪ್ರಗತಿಯು ಸಾಧಿಸಲು ಅಸಾಧ್ಯವಾಗಿರುತ್ತದೆ.

ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ , ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ.

ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲೀಕರು ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಸದ್ರಿಯವರು ಅವರಿಂದ ಮಾಹಿತಿಯನ್ನು ಪಡೆದು ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಿಸಬೇಕು. ಸದರಿ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು ಸೈಬರ್, ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ.
ಈವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ಮುಂದಿನ ದಿನಗಳಲ್ಲಿ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಡಿಸಿ ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here