Monday, November 25, 2024

ನ.1ರಿಂದ 7 ರವರೆಗೆ ಕುಂದಾಪುರದಲ್ಲಿ “ಕನ್ನಡ ಹಬ್ಬ ಸಪ್ತಾಹ”

Must read

ಉಡುಪಿ: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಉದ್ದೇಶದಿಂದ ನ.1ರಿಂದ ನ.7 ರವರೆಗೆ “ಕನ್ನಡ ಹಬ್ಬ ಸಪ್ತಾಹ”ವನ್ನು ಕುಂದಾಪುರದಲ್ಲಿ ಆಯೋಜಿಸಲಾಗಿದೆ. ಈ ಅದ್ಧೂರಿ ಸಪ್ತಾಹಕ್ಕೆ ಚಾಲನೆ ನೀಡುವ ಸಲುವಾಗಿ ಅ.31ರಂದು ‘ಕನ್ನಡ ರಥೋತ್ಸವ’ ಎಂಬ ಪುರ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕಸಾಪ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಸಚಿವರು, ರಾಜಕೀಯ ಮುಖಂಡರು ಭಾಗವಹಿಸಿದ್ದಾರೆ. ವಿವಿಧ ಕಲಾತಂಡಗಳು, ಭಜನಾ ತಂಡಗಳು, ಬೆಂಕಿಯಾಟ, ಅನ್ಯ ಭಾಷಿಕರ ತಂಡಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಲಿವೆ ಎಂದರು.


3 ಸಾವಿರಕ್ಕೂ ಅಧಿಕ ಮಂದಿ ಈ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಕುಂದಾಪುರ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬರಲಿದ್ದು, ನಗರದಾದ್ಯಂತ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ನ.1 ರಿಂದ 7 ರವರೆಗೆ ಪ್ರತಿದಿನ ಸಂಜೆ 6ರಿಂದ ಕನ್ನಡದ ನೆಲೆಯಲ್ಲಿ ಕನ್ನಡ ಭಾಷೆಯಲ್ಲಿ ಕೊಡುಗೆ ನೀಡಿದವರ ಉಪನ್ಯಾಸ ಕಾರ್ಯಕ್ರಮ ಹಾಗೂ ಮನೋರಂಜನೆ ಕಾರ್ಯಕ್ರಮ ನಡೆಯಲಿದೆ. ನ. 7 ರಂದು ಪ್ರಾಣೇಶ್ ಗಂಗಾವತಿ ಅವರಿಂದ ಹಾಸ್ಯದ ಹೊನಲು ನಡೆಯಲಿದೆ. ಮೊದಲ ಐದು ಕಾರ್ಯಕ್ರಮ ರೋಟರಿ ಸಭಾಭವನ ಹಾಗೂ ಎರಡು ದಿನದ ಕಾರ್ಯಕ್ರಮ ಜೂನಿಯರ್ ಕಾಲೇಜಿನ ಬಯಲು ಮಂದಿರದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿನ ಸದಸ್ಯರಾದ ಶ್ರೀಧರ್ ಸುವರ್ಣ, ರಾಮಚಂದ್ರ ಬಿ.ಎನ್. ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here