Thursday, November 21, 2024

ಬೈಂದೂರು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಜೀವಬೆದರಿಕೆ; 13 ಮಂದಿ ಆರೋಪಿಗಳ ಸೆರೆ

Must read

ಉಡುಪಿ: ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಅವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸಹಿತ ಒಟ್ಟು 13 ಮಂದಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆಲೂರು ಹೊಯ್ಯಾಣ ನಿವಾಸಿ ಸಚಿನ್ (24), ಆಲೂರು ರಾಮೇಶ್ವರ ನಗರ ನಿವಾಸಿ ಶರತ್ ದೇವಾಡಿಗ (24), ಕೆಂಬೈಲು ನಿವಾಸಿ‌ಗಳಾದ ಕಾರ್ತಿಕ್ (22), ಹಾಗೂ ಕೀರ್ತಿಕ್ (20), ಪಡುಕೋಣೆ‌ ನಿವಾಸಿ ಪ್ರಕಾಶ್ (20), ಪಡುಕೋಣೆಯ ಹನುಮಂತನಗರ ನಿವಾಸಿ ಜಗದೀಶ್ (31), ಪಡುಕೋಣೆ ರಾಮಮಂದಿರ ನಿವಾಸಿ ಗೌತಮ್ (23), ಪಡುಕೋಣೆ ನಿವಾಸಿ‌ ಮಹೇಂದ್ರ ಪೂಜಾರಿ, ಹಡವು ನಿವಾಸಿ‌ ಸಂತೋಷ್ ಮೊಗವೀರ, ರೋಶನ್‌ ಫೆರ್ನಾಂಡೀಸ್, ಆಲೂರು ನಿವಾಸಿ ಪ್ರಸಾದ್ ಆಚಾರ್ಯ (30) ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳಿಂದ 1 ಏರ್ ಪಿಸ್ತೂಲ್, 4 ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ‌. ಕಳೆದ ಐದು ದಿನಗಳ‌ ಹಿಂದೆ ಪಡುಕೋಣೆ ನಿವಾಸಿ ಶ್ರೀಕಾಂತ ಪೂಜಾರಿ ಹಡವು ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಹೋಗುವ ಕ್ರಾಸ್ ಬಳಿ ಸಂಜೆ ಸ್ನೇಹಿತರೊಂದಿಗೆ ಮಾತನಾಡುತ್ತಾ ನಿಂತುಕೊಂಡಿದ್ದರು. ಈ ವೇಳೆ ಆರೋಪಿಗಳು ಏಕಾಏಕಿ ಮಾರಕಾಯುಧಗಳಿಂದ ಬಂದು ಹಲ್ಲೆಗೆ ಯತ್ನಿಸಿದ್ದಾರೆ‌‌.
ಶ್ರೀಕಾಂತ ಹಾಗೂ ಸ್ನೇಹಿತರು ಅಲ್ಲೆ ಸ್ವಲ್ಪ ದೂರ ಹೋಗಿ ನಿಂತಿದ್ದು, ಶಿವಕುಮಾರ್ ಹೆಬ್ಬಾರ್ ಹಾಗೂ ಅವರ ಮಗ ಮನು ಅವರು ಆರೋಪಿಗಳನ್ನು ಎದುರಿಸಲು ಹೋದಾಗ ಅವರಿಗೆ ಆರೋಪಿ ವಿಶ್ವನಾಥ ಪಡುಕೋಣೆ, ರೋಶನ್ ಫೆರ್ನಾಂಡಿಸ್, ಪ್ರವೀಣ ಪಡುಕೋಣೆ ತಮ್ಮಲ್ಲಿದ್ದ ಮಾರಕಾಯುಧಗಳಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಪರಿಣಾಮ ಶಿವಕುಮಾರ್ ಹೆಬ್ಬಾರ್ ಅವರ ಕೈ ಕಾಲಿಗೆ ಗಾಯಗಳಾಗಿ, ಮನು ಹೆಬ್ಬಾರ್ ತಲೆಗೆ ಗಾಯಗಳಾಗಿದೆ.

ಆರೋಪಿಗಳು ಅಲ್ಲೇ ಸಮೀಪದಲ್ಲಿ ನಿಂತಿದ್ದ ಸುದೇಶ್ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಅವರಿಗೂ ಬೆದರಿಕೆ ಹಾಕಿದ್ದಾನೆ. ಇದು ಲೈಸನ್ಸ್ ಇಲ್ಲದೇ ಇರುವ ಪಿಸ್ತೂಲ್, ನಿಮ್ಮನ್ನು ಕೊಂದು, ಪಿಸ್ತೂಲ್ ಬಿಸಾಕಿ ಹೋಗುತ್ತೇನೆ. ಯಾರಿಂದಲೂ ಏನೂ ಮಾಡಲು ಆಗೋದಿಲ್ಲ. ಗಲಾಟೆ ಮಾಡುವುದಿದ್ದರೇ ನಿಮಗೆ ಈಗಲೇ ಶೂಟ್ ಮಾಡಿ ಸಾಯಿಸುವುದಾಗಿ ಪಿಸ್ತೂಲ್ ತಲೆಗೆ ಹಿಡಿದು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಶ್ರೀಕಾಂತ ಅವರನ್ನು ಆರೋಪಿ ಸಚಿನ್ ಪೂಜಾರಿ ಅಡ್ಡಗಟ್ಟಿ ತನ್ನ ಕೈಯಲ್ಲಿದ್ದ ಪಿಸ್ತೂಲ್ ಅನ್ನು ಅವರ ತಲೆಗೆ ಗುರಿ ಶೂಟ್ ಮಾಡಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ.ಅಲ್ಲದೆ, ಕೈಯಿಂದ ಕೆನ್ನೆ, ತಲೆಗೆ ಹೊಡೆದು ಹಲ್ಲೆ ಮಾಡಿದ್ದಾನೆ ಎಂದು ಶ್ರೀಕಾಂತ್ ದೂರಿನಲ್ಲಿ ತಿಳಿಸಿದ್ದಾರೆ.
ಶ್ರೀಕಾಂತ್ ಹಾಗೂ ಆರೋಪಿ ವಿಶ್ವನಾಥ ಪಡುಕೋಣೆ ಹಾಗೂ ಇತರರ ಮಧ್ಯೆ ಹಳೆಯ ದ್ವೇಷ ಇದ್ದು, ಅದೇ ದ್ವೇಷದಿಂದ ಈ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ತನಿಖೆಯಿಂದ ತಿಳಿದುಬಂದಿದೆ.

spot_img

More articles

LEAVE A REPLY

Please enter your comment!
Please enter your name here