ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದ ಸ್ವಚ್ಛತಾ ಕಾರ್ಯವೈಖರಿಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದರ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟ್ವಿಟ್ಟರ್ನಲ್ಲಿ ವೀಡಿಯೋ ಶೇರ್ ಮಾಡಿಕೊಂಡು ವಂಡ್ಸೆ ಗ್ರಾಮ ಪಂಚಾಯತ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಸಿಎಂ, ಬಿಬಿಎಂಪಿ ಕಮೀಷನರ್ಗೆ ಟ್ಯಾಗ್ ಮಾಡಿ ವೀಡಿಯೋ ಶೇರ್ ಮಾಡಿದ್ದಾರೆ. ಮಹಾನಗರದ ವಾರ್ಡ್ಗಳಿಗೆ ವಂಡ್ಸೆ ಗ್ರಾಮ ಮಾದರಿಯಾಗಿದೆ. ಸರಕಾರ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಶಾ ಮನವಿ ಮಾಡಿದ್ದಾರೆ.
ವಂಡ್ಸೆ ಗ್ರಾಪಂ ತ್ಯಾಜ್ಯ ಮುಕ್ತ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.