ಉಡುಪಿ: ಫೆಂಗಲ್ ಚಂಡಮಾರುತ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು (1-12ನೇ ತರಗತಿವರೆಗೆ) ವಿದ್ಯಾರ್ಥಿಗಳಿಗೆ ಡಿ.3ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.