Saturday, January 11, 2025

ಪೇಜಾವರ ಶ್ರೀ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದವರ ವಿರುದ್ಧ ಕಾನೂನು ಹೋರಾಟ; ವಿಹಿಂಪ

Must read

ಉಡುಪಿ: ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಹಿತ ಇತರರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂಬಿ ಪುರಾಣಿಕ್ ಹೇಳಿದರು.

ಉಡುಪಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ.23 ರಂದು ಬೆಂಗಳೂರಿನ ವಿವಿ ಪುರಂನಲ್ಲಿರುವ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀ ಸೇರಿದಂತೆ 50 ಕ್ಕೂ ಹೆಚ್ಚು ಸಂತರು ಆಗಮಿಸಿದ್ದರು. ಈ ಸಭೆಯಲ್ಲಿ ಪೇಜಾವರ ಶ್ರೀಗಳು ಆಡಿರುವ ಮಾತನ್ನು ತಿರುಚಿ ಪತ್ರಿಕೆಗಳು ಪ್ರಕಟಿಸಿವೆ. ಈ ಮೂಲಕ ಸಮಾಜ ಸ್ವಾಸ್ಥ್ಯವನ್ನು ಕೆಡಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದರು.

ಅಲ್ಲದೇ ಭೀಮ್ ಆರ್ಮಿ ಏಕತಾ ಮಿಷನ್ ಕರ್ನಾಟಕ ವತಿಯಿಂದ ವಿಜಯಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮತೀನ್ ಕುಮಾರ್, ಪರಶುರಾಮ್, ಹುಸೇನಪ್ಪ ಛಲವಾದಿ, ಸಂತೋಷ್ ಟಕ್ಕೆ, ಆಶಾ ಹೊಣೇರಿ, ಖಾಯಮ್ ಚೌದ್ರಿ ಪೇಜಾವರ ಮಠದ ಯತಿಗಳ ಬಗ್ಗೆ ತುಚ್ಚವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿದ್ದಾರೆ. ಶ್ರೀಗಳ ತೇಜೊವಧೆ ನಡೆಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಉಡುಪಿ ಜಿಲ್ಲಾ ಎಸ್ಪಿಯವರಿಗೆ ಮನವಿಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಹಿಂಪ ಪ್ರಾಂತ ಕಾರ್ಯದರ್ಶಿ ಜಗನ್ನಾಥ್ ಶಾಸ್ತ್ರಿ, ಸಹಕಾರ್ಯದರ್ಶಿ ಶರಣ್ ಪಂಪ್ವೆಲ್, ಪ್ರಮುಖರಾದ ಪ್ರೇಮಾನಂದ್ ಶೆಟ್ಟಿ, ಬಸವರಾಜ್ ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here