ಉಡುಪಿ: ಉದ್ಯಾವರ ಬೊಳ್ಜೆ ನಿವಾಸಿ ಆದಿತ್ಯ (24) ಎಂಬವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೆರಂಪಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಹೊನಲುಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಬಳಿಕ ಮನೆಗೆ ಬಂದ ಆದಿತ್ಯ ಅವರು ಮುಂಜಾನೆ 4 ಗಂಟೆಯ ಸುಮಾರಿಗೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದಿತ್ಯ ಅವರು ಕಳೆದ ವರ್ಷ ಅಪಘಾತದಲ್ಲಿ ನಿಧನರಾಗಿದ್ದ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವೊಂದನ್ನು ಕಟ್ಟಿದ್ದರು.