Friday, January 10, 2025

ಉಡುಪಿ ನಗರದ ಸಮಗ್ರ ಅಭಿವೃದ್ಧಿಗೆ ಶ್ರೀಕೃಷ್ಣ ಕಾರಿಡಾರ್ ಯೋಜನೆ: ಶಾಸಕ ಯಶ್ ಪಾಲ್ ಸುವರ್ಣ

Must read

ಉಡುಪಿ: ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್‌ರೋಡ್, ಟ್ರಾಫಿಕ್ ಸಂಚಾರ, ಸಿಸಿಟವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಇದಕ್ಕಾಗಿ ಪ್ರಧಾನ ಮಂತ್ರಿಗೆ 300ಕೋಟಿ ರೂ. ವೆಚ್ಚದ ಪ್ರಸ್ತಾಪವನ್ನು ಸಲ್ಲಿಸಲು ಉದ್ದೇಶಿಸಲಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ನಗರದ ಸಮಸ್ಯೆ ಮತ್ತು ಅಭಿವೃದ್ಧಿ ಯೋಜನೆ ಕುರಿತು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಗರದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿದ್ದು, ಕುಡಿಯುವ ನೀರು ಸಹಿತ ಒಳಚರಂಡಿ ಕಾಮಗಾರಿಗೆ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ 400 ಕೋಟಿ ರೂ. ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದನ್ನು ವೈಜ್ಞಾನಿಕ ರೀತಿಯಲ್ಲಿ ಮಾಡಲು ಸುಮಾರು 700-800 ಕೋಟಿ ರೂ. ಅನುದಾನ ಅಗತ್ಯವಿದೆ ಎಂದರು.
ಬೀಡಿನಗುಡ್ಡೆಯಲ್ಲಿ ಸರ್ವ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ, ಮಣ್ಣಪಳ್ಳ ಅಭಿವೃದ್ಧಿಗೆ ಯೋಜನೆ ಹಾಕಿಕೊಳ್ಳಲಾಗಿದ್ದು, ನಗರದ ಸಂಚಾರ ದಟ್ಟನೆ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರೊಂದಿಗೆ ಯೋಜನೆ ರೂಪಿಸಲಾಗುವುದು. ಉತ್ತಮ ಸಂಚಾರಕ್ಕಾಗಿ ಆಯ್ದ ಭಾಗಗಳಲ್ಲಿ ಸಿಸಿಟಿವಿ ಅಳವಡಿಕೆ, ಕೋನ್‌ಗಳ ಅಳವಡಿಕೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ವಾರಾಹಿ ಯೋಜನೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪರೀಕ್ಷೆ ಸಂದರ್ಭದಲ್ಲಿ ಲೀಕೇಜ್‌ಗಳನ್ನು ಪತ್ತೆ ಹಚ್ಚಲಾಗುತ್ತಿದೆ. ನಗರದ ಸಮಸ್ಯೆಗಳ ಬಗ್ಗೆ ಗಮನಹರಿಸುವ ನಿಟ್ಟಿನಲ್ಲಿ ತಿಂಗಳಲ್ಲಿ 2 ಬಾರಿ ಅದಾಲತ್ ಆಯೋಜಿಸ ಲಾಗುವುದು. ಆಟೋರಿಕ್ಷಾ ತಂಗುದಾಣಕ್ಕೆ ಸೂಕ್ತ ಮಾರ್ಗಸೂಚಿ ರಚನೆ, ಬೀದಿಬದಿ ಅಂಗಡಿಗಳಿಗೆ ಪ್ರತ್ಯೇಕ ರೆನ್, ಮಲ್ಟಿಲೆವಲ್ ಪಾರ್ಕಿಂಗ್‌ಗೆ ಸೂಕ್ತ ಕ್ರಮ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಗಲಿದ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಅವರ ಕುಟುಂಬಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯಿಂದ ಸಹಾಯಧನದ ಚೆಕ್ ವಿತರಿಸಲಾಯಿತು. ರಾಜ್ಯ ಸಂಘದಿಂದ ನೀಡಲಾದ ಪತ್ರಿಭಾ ಪುರಸ್ಕಾರದ ಚೆಕ್ ಅನ್ನು ಸಂಘದ ಸದಸ್ಯರ ಮಕ್ಕಳಿಗೆ ಹಸ್ತಾಂತರಿಸಲಾಯಿತು.

ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಯು.ಎಸ್.ಶೆಣೈ, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು. ಇದಕ್ಕೂ ಮೊದಲು ನಗರಸಭೆ ವತಿಯಿಂದ ಪತ್ರಿಕಾ ಭವನದ ಮುಂಭಾಗ ಅಳವಡಿಸಲಾದ ಇಂಟಲಾಕ್‌ನ ಉದ್ಘಾಟನೆ ಯನ್ನು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ನೆರವೇರಿಸಿದರು.

spot_img

More articles

LEAVE A REPLY

Please enter your comment!
Please enter your name here