Thursday, January 16, 2025

ಉಡುಪಿ: ಜ್ಯುವೆಲ್ಲರಿಯ ಉದ್ಯೋಗಿ ಬಾವಿಗೆ ಹಾರಿ ಆತ್ಮಹತ್ಯೆ

Must read

ಉಡುಪಿ: ಜ್ಯುವೆಲ್ಲರಿ ಮಳಿಗೆಯ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಬಡಾನಿಡಿಯೂರು ಗ್ರಾಮದ ರಮೇಶ ಶೇರಿಗಾರ್(37) ಎಂದು ಗುರುತಿಸಲಾಗಿದೆ. ಉಡುಪಿಯ ಪ್ರತಿಷ್ಠಿತ ಜ್ಯುವೆಲ್ಲರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಜ.12ರಂದು ರಾತ್ರಿ ಮನೆಯಿಂದ ತೆರಳಿದ್ದರು. ಬಳಿಕ ರಮೇಶ್ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಜ.14ರಂದು ಸಂಜೆ 7 ಗಂಟೆಗೆ ಸುಮಾರಿಗೆ ಗರಡಿಮಜಲು ದೇವಿಕಟ್ಟೆಯ ಹಿಂಬದಿಯ ತೋಟದಲ್ಲಿರುವ ಬಾವಿಯ ಒಳಗೆ ರಮೇಶ ಅವರ ಮೃತದೇಹವು ಪತ್ತೆಯಾಗಿದೆ. ಇವರು ಮಾನಸಿಕ ಖಿನ್ನತೆಯಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ರಾತ್ರಿ ವೇಳೆಯೇ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ಈಶ್ವರ್ ಮಲ್ಪೆ ಮೇಲಕ್ಕೆತ್ತಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಸಾಗಿಸಲು ಸಹಕರಿಸಿದರು

spot_img

More articles

LEAVE A REPLY

Please enter your comment!
Please enter your name here