ಉಡುಪಿ ಕುಂಜಿಬೆಟ್ಟಿನ ಶಾರದಾ ಲ್ಯಾಣ ಮಂಟಪದ ವ್ಯವಸ್ಥಾಪಕ ಅಜಿತ್ ರಾವ್ (43) ಅವರು ಹೃದಯಾಘಾತದಿಂದ ನಿಧನ ಹೊಂದಿದರು.
ಇವರು ಇಂದು ಸಂಜೆ ಕಲ್ಯಾಣ ಮಂಟಪದಲ್ಲಿ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಒಮ್ಮಿಂದೊಮ್ಮೆಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಸ್ಥಳದಲ್ಲಿದ್ದ ಆಟೋ ರಿಕ್ಷಾದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ದಾರಿ ಮಧ್ಯೆ ಅಜಿತ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಮೃತರು ತಾಯಿ, ಪತ್ನಿ, ಓರ್ವ ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.