Sunday, November 24, 2024

ಉಡುಪಿ: ಜನಜಾಗೃತಿ ಜಾಥಾ ಮತ್ತು ಸಮಾವೇಶ ಉದ್ಘಾಟನೆ

Must read

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀಕೃಷ್ಣಮಠ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಸಹಯೋಗದಲ್ಲಿ‌ ಗಾಂಧಿ ಜಯಂತಿಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ – 2023 ಕಾರ್ಯಕ್ರಮವನ್ನು ನಗರದ ರಾಜಾಂಗಣದಲ್ಲಿ ಇಂದು ಆಯೋಜಿಸಲಾಯಿತು.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ಸತ್ಯಾನಂದ ನಾಯಕ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.

ಪರ್ಯಾಯ ಶ್ರೀ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್, ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ರಿ. ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಕಟಪೂರ್ವ ರಾಜ್ಯಾಧ್ಯಕ್ಷ ದೇವದಾಸ್ ಹೆಬ್ಬಾರ್, ಉಡುಪಿ ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಉಡುಪಿ ವಿಭಾಗ ಸೂಕ್ಷ್ಮ ವಿಮಾ ವಿಭಾಗ ಪ್ರಬಂಧಕ ದಿನೇಶ್ ಪ್ರಭು, ಬ್ರಹ್ಮಾವರ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ನಗರಸಭಾ ಸದಸ್ಯರಾದ ಮಾನಸ ಸಿ ಪೈ, ಉಡುಪಿ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷೆ ಶಮಿತ ಪಿ ಶೆಟ್ಟಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here