Thursday, September 19, 2024

ಉಡುಪಿ: ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ ಯುವಕರು

Must read

ಉಡುಪಿ: ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಯುವಕರ ಗುಂಪೊಂದು ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ ಘಟನೆ‌ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ‌ ನಿನ್ನೆ ರಾತ್ರಿ ನಡೆದಿದೆ.

ನಶೆಯಲ್ಲಿದ್ದ ಯುವಕರು ಮೊದಲು ಹಿರಿಯ ನಾಗರಿಕರೊಬ್ಬರಿಗೆ ಹಲ್ಲೆ ನಡೆಸಲು ಮುಂದಾಗಿದ್ದರು. ಇದನ್ನು ಕಂಡ ಆಟೋ ಚಾಲಕನೋರ್ವರು ತಡೆಯಲು ಬಂದಿದ್ದಾರೆ. ಈ ವೇಳೆ ಯುವಕರು ಮತ್ತು ಆಟೋ ಚಾಲಕನ ನಡುವೆ ವಾಗ್ವಾದ ನಡೆದಿದೆ. ಬಳಿಕ ನಶೆಯಲ್ಲಿ ತೂರಾಡುತ್ತಿದ್ದ ಯುವಕರು ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ.

ಘಟನಾಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಹಲ್ಲೆ ನಡೆಸಿದ ನಾಲ್ವರು ಯುವಕರನ್ನು‌ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

spot_img

More articles

LEAVE A REPLY

Please enter your comment!
Please enter your name here