ಉಡುಪಿ: ಇಸ್ರೇಲ್ ನಲ್ಲಿ ನಮ್ಮವರಿಗೆ ಸಮಸ್ಯೆಯಾದ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಉಡುಪಿ ಜಿಲ್ಲಾಡಳಿತಕ್ಕೆ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.ಪರಿಸ್ಥಿತಿ ಅವಲೋಕನ ಮಾಡಿ ಇನ್ನೆರಡು ದಿನದಲ್ಲಿ ಮಾಹಿತಿ ಬರಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದ್ರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದಂತೆ ಉಡುಪಿ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ. ಇಸ್ರೇಲ್ ನಲ್ಲಿ ಸಂಕಷ್ಟದಲ್ಲಿ ಇದ್ದರೆ ರಾಯಭಾರಿ ಕಚೇರಿಯನ್ನು ಸಂಪರ್ಕ ಮಾಡಬಹುದು. ಕುಟುಂಬದವರು ಜಿಲ್ಲಾಡಳಿತಕ್ಕೆ ಅಲ್ಲಿನ ಪರಿಸ್ಥಿತಿಯನ್ನು ತಿಳಿಸಬಹುದು.
ಉಡುಪಿ ಜಿಲ್ಲಾಡಳಿತ ಸರ್ಕಾರದ ಸೂಚನೆಯಂತೆ ನಡೆದುಕೊಳ್ಳುತ್ತದೆ. ಉಡುಪಿ ಜಿಲ್ಲಾಡಳಿತದ ಬಳಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಮ್ ಇದೆ. ಜಿಲ್ಲಾಡಳಿತ ಕಂಟ್ರೋಲ್ ರೂಂ ಸಿಬ್ಬಂದಿಗೆ ಸೂಚನೆಯನ್ನು ಕೊಟ್ಟಿದೆ. ಈವರೆಗೆ ಉಡುಪಿ ಜಿಲ್ಲೆಯಿಂದ ಯಾವುದೇ ಕುಟುಂಬ ನಮ್ಮನ್ನು ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.