Friday, September 20, 2024

ಸತತ ಮೂರನೇ ಬಾರಿ 80 ಬಡಗಬೆಟ್ಟು ಗ್ರಾ.ಪಂಗೆ ಗಾಂಧಿ ಪುರಸ್ಕಾರ: ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿಗೆ ಅಭಿನಂದನೆ

Must read

ಉಡುಪಿ: 80ನೇ ಬಡಗಬೆಟ್ಟು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ “ಗಾಂಧಿ ಗ್ರಾಮ ಪುರಸ್ಕಾರ” ಲಭಿಸಿದೆ. ಈ ಹಿನ್ನೆಲೆಯಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು 80 ಬಡಗಬೆಟ್ಟು ಮೂಡುಮನೆ ಇವರ ವತಿಯಿಂದ ಇಂದು ಅಭಿನಂದಿಸಲಾಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅರ್ಬಿ ವೈಶ್ಣವಿ ದುರ್ಗಾ ದೇವಸ್ಥಾನದ ಆಡಳಿತ ಮೊಕ್ತೇಸರ ಜಯರಾಜ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್, ಉಪಾಧ್ಯಕ್ಷೆ ರೂಪಾ ನಾಯಕ್, 80 ಬಡಗಬೆಟ್ಟು ಶಾಲಾ ಮುಖ್ಯೋಪಾಧ್ಯಾಯ ಸುರೇಶ್, 80 ಬಡಗಬೆಟ್ಟು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ವಿದ್ವಾನ್ ವೆಂಕಟಾಚಲ ಭಟ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲ ಕುಂದರ್ ಹಾಗೂ ಬಿ. ಶ್ರೀನಾಥ್ ಹೆಗ್ಡೆ, ಬಿ. ಅರುಣಾಚಲ ಹೆಗ್ಡೆ, ಗ್ರಾಮ ಪಂಚಾಯತ್ ಸದಸ್ಯರಾದ ಉಪೇಂದ್ರ ನಾಯಕ್, ಶಾಂತಾರಾಮ್, ಶುಭಕರ್ ಶೆಟ್ಟಿ, ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here