Saturday, November 23, 2024

ತುಳುನಾಡಿನ ಧಾರ್ಮಿಕ ಆಚರಣೆಗೆ ಜಿಲ್ಲಾಡಳಿತ ಸಹಕಾರ ನೀಡಲಿ: ಶಾಸಕ ಯಶ್ ಪಾಲ್ ಸುವರ್ಣ

Must read

ಉಡುಪಿ: ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಬಗ್ಗೆ ನಿರ್ಧಾರವನ್ನು ಪುನರ್ ಪರಿಶೀಲಿಸಿ ಸಹಕರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ದೈವಾರಾಧನೆಯ ಚೌಕಟ್ಟಿನಲ್ಲಿ ದೈವಗಳಿಗೆ ರಕ್ತಹಾರದ ಕಲ್ಪನೆಯಲ್ಲಿ ಹಲವು ದೈವಸ್ಥಾನ, ಮಂದಿರಗಳಲ್ಲಿ ಹಲವಾರು ದಶಕಗಳಿಂದ ಕೋಳಿಪಡೆ ಆಯೋಜಿಸುವ ಪದ್ಧತಿ ಇದೆ, ಹಾಗೂ ಜಿಲ್ಲೆಯಾದ್ಯಂತ ಯಕ್ಷಗಾನ, ನೇಮೋತ್ಸವ ಕಾರ್ಯಕ್ರಮಗಳು ಈ ಹಿಂದಿನಿಂದಲೂ ನಿರಂತರವಾಗಿ ನಡೆಯುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ತುಳುನಾಡಿನ ಸಾಂಸ್ಕೃತಿಕ ಹಿನ್ನೆಲೆ, ಧಾರ್ಮಿಕ ನಂಬಿಕೆಗಳಿಗೆ ಪೂರಕವಾಗಿ ಅವಕಾಶ ನೀಡಿ ಸಹಕರಿಸಬೇಕು.

ಶೀಘ್ರದಲ್ಲಿಯೇ ಜಿಲ್ಲೆಯ ಎಲ್ಲಾ ಶಾಸಕರು ಜಿಲ್ಲಾಡಳಿತದೊಂದಿಗೆ ಈ ಬಗ್ಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ್ದಾರೆ.

5 ತಿಂಗಳು ಕಳೆದರೂ ನಡೆಯದ ಪ್ರಗತಿ ಪರಿಶೀಲನಾ ಸಭೆ:
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು 5 ತಿಂಗಳು ಕಳೆದರೂ ಈವರೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಯದೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಬಹುತೇಕ ಸ್ಥಗಿತಗೊಂಡಿದೆ.

ವಿವಿಧ ಇಲಾಖೆಗಳ ಹಲವಾರು ಯೋಜನೆಗಳ ಅನುದಾನ ಬಿಡುಗಡೆಯಾಗದೇ ಅತಂತ್ರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಬೇಕು ಎಂದು ಒತ್ತಾಯಿಸಿದ್ರು

spot_img

More articles

LEAVE A REPLY

Please enter your comment!
Please enter your name here