ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ಕಾರ್ಯಕ್ರಮವು ನವೆಂಬರ್ 26 ರಿಂದ 28 ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ನವೆಂಬರ್ 27 ರ ಬೆಳಗ್ಗೆ 6 ರಿಂದ ನವೆಂಬರ್ 28 ರ ರಾತ್ರಿ 12 ರ ವರೆಗೆ ಬಾರ್ & ರೆಸ್ಟೋರೆಂಟ್ ಮತ್ತು ವೈನ್ಶಾಪ್ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ರಥೋತ್ಸವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ ಈ ಮೇಲಿನ ಗ್ರಾಮಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ, ಒಣ ದಿನ ಎಂದು ಘೋಷಿಸಿದ್ದಾರೆ.