Saturday, November 23, 2024

ಪುತ್ತಿಗೆ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ ಸಂಪನ್ನ

Must read

ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಪೂರ್ವಭಾವಿಯಾಗಿ ನಾಲ್ಕನೇ ಹಾಗೂ ಕೊನೆಯ ಧಾನ್ಯ ಮುಹೂರ್ತವು ಬುಧವಾರ ವೈಭವದಿಂದ ನೆರವೇರಿತು.

ಈಗಾಗಲೇ ಬಾಳೆ, ಅಕ್ಕಿ, ಕಟ್ಟಿಗೆ ಮುಹೂರ್ತ ಪೂರೈಸಿದ್ದು ತೀರ್ಥ ಕ್ಷೇತ್ರ ಸಂಚಾರ ಬಳಿಕ ಜ.8ರಂದು ತಮ್ಮ ಶಿಷ್ಯ‌ ಸುಶ್ರೀಂದ್ರತೀರ್ಥರ ಒಡಗೂಡಿ ಸುಗುಣೇಂದ್ರತೀರ್ಥರು ಉಡುಪಿ ಪುರಪ್ರವೇಶ ಮಾಡಲಿದ್ದಾರೆ.

ಧಾನ್ಯ ಮುಹೂರ್ತ ಅಂಗವಾಗಿ ಪುತ್ತಿಗೆ ಮಠದ ವಿಠಲ ದೇವರಿಗೆ ಬೆಳಗ್ಗಿನ ಮಹಾಪೂಜೆ ಸಲ್ಲಿಸಿ, ದೇವತಾ ಪ್ರಾರ್ಥನೆ ನೆರವೇರಿತು. ಬಳಿಕ ಮೆರವಣಿಗೆಯಲ್ಲಿ ತೆರಳಿ ಚಂದ್ರೇಶ್ವರ, ಅನಂತೇಶ್ವರ, ಶ್ರೀಕೃಷ್ಣ ಮುಖ್ಯಪ್ರಾಣ, ಗರುಢ, ಮಧ್ವ, ಸರ್ವಜ್ಞ ಸಿಂಹಾಸನ, ಭೋಜನ ಶಾಲೆ ಪ್ರಾಣ ದೇವರು, ಸುಬ್ರಹ್ಮಣ್ಯ ಗುಡಿ, ನವಗ್ರಹ ಗುಡಿ, ವೃಂದಾವನ, ಗೋ ಶಾಲೆಗೆ ತೆರಳಿ ಪ್ರಾರ್ಥನೆ ಸಲ್ಲಿಸಲಾಯಿತು.

ಪುತ್ತಿಗೆ ಮಠಕ್ಕೆ ಮರಳಿ ಬಂದು ತಲೆ ಹೊರೆಯಲ್ಲಿ ಧಾನ್ಯ ಮುಡಿ, ಸ್ವರ್ಣ ಪಲ್ಲಕ್ಕಿಯಲ್ಲಿ ಕಿರು ಮುಡಿಯಿಟ್ಟು ರಥಬೀದಿಯಲ್ಲಿ ಮೆರವಣಿಗೆ ಬಳಿಕ ಶ್ರೀಕೃಷ್ಣಮಠದ ಬಡಗುಮಾಳಿಗೆಯ ಗದ್ದುಗೆಯಲ್ಲಿ ನಾಲ್ಕು ಮುಡಿಗಳ ಮೇಲೆ ಕಿರು ಮುಡಿಯಿಟ್ಟು ಪೂಜೆ ಸಲ್ಲಿಸಲಾಯಿತು.

ವಿವಿಧ ಮಠ, ಉಪಮಠದ ಪ್ರತಿನಿಧಿಗಳು, ವಿದ್ವಾಂಸರಿಗೆ ಗೌರವ, ನವಗ್ರಹ ದಾನ ನೀಡಿದ ಬಳಿಕ ಮರಳಿ ಪುತ್ತಿಗೆ ಮಠಕ್ಕೆ ಬಂದು ವಿಠಲ ದೇವರಿಗೆ ಪೂಜೆ ಸಲ್ಲಿಸಲಾಯಿತು.

ಭುವನಾಭಿರಾಮ ಉಡುಪ, ಹರಿಕೃಷ್ಣ ಪುನರೂರು, ಜಯಕರ ಶೆಟ್ಟಿ, ರಂಜನ್ ಕಲ್ಕೂರ, ಬಿ. ಗೋಪಾಲಾಚಾರ್ಯ, ಮುರಳೀಧರ ಆಚಾರ್ಯ, ಪ್ರಸನ್ನ ಆಚಾರ್ಯ, ಮಂಜುನಾಥ ಉಪಾಧ್ಯ, ಶ್ರೀನಾಗೇಶ್ ಹೆಗ್ಡೆ, ವಿ.ಜಿ.ಶೆಟ್ಟಿ, ಕೆ.ಉದಯ ಕುಮಾರ್ ಶೆಟ್ಟಿ, ಅಶೋಕ್ ಕುಮಾರ್ ಕೊಡವೂರು, ದಿನೇಶ್ ಪುತ್ರನ್, ಸುಬ್ರಹ್ಮಣ್ಯ ಉಪಾಧ್ಯ, ರಾಘವೇಂದ್ರ ಭಟ್, ಮಧ್ವರಮಣ ಆಚಾರ್, ರಾಘವೇಂದ್ರ ತಂತ್ರಿ, ಶ್ರೀಧರ‌ ಉಪಾಧ್ಯ, ವಿದ್ವಾನ್ ಹೆರ್ಗ ಹರಿಪ್ರಸಾದ್ ಉಪಸ್ಥಿತರಿದ್ದರು.

ಧಾನ್ಯ ಮುಹೂರ್ತದ ಧಾರ್ಮಿಕ ವಿಧಿ ವಿಧಾನವು ರಾಘವೇಂದ್ರ ಕೊಡಂಚ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಮಧ್ವ ಸರೋವರದ ಬಳಿ ನಿರ್ಮಿಸಿದ ಕಟ್ಟಿಗೆ ರಥಕ್ಕೆ ಶಿಖರ ಇಡಲಾಯಿತು.

ಏನಿದು ಧಾನ್ಯ ಮುಹೂರ್ತ?
2024, ಜ.18ರಿಂದ ಎರಡು ವರ್ಷಗಳ ಕಾಲ ನಡೆವ ಪುತ್ತಿಗೆ ಪರ್ಯಾಯಕ್ಕೆ ಬರುವ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಿಟ್ಟಿನಲ್ಲಿ ಧಾನ್ಯ ಸಂಗ್ರಹವೇ ಧಾನ್ಯ ಮುಹೂರ್ತದ ಹಿಂದಿರುವ‌ ವೈಶಿಷ್ಟ್ಯವಾಗಿದೆ.

spot_img

More articles

LEAVE A REPLY

Please enter your comment!
Please enter your name here