ಹೊಸದಿಲ್ಲಿ: ಜಮ್ಮು ಕಾಶ್ಮೀರದಲ್ಲಿ ವಿಧಿ 370 ಜಾರಿ ಒಂದು ತಾತ್ಕಾಲಿಕ ಕ್ರಮವಾಗಿತ್ತು ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಸಂದರ್ಭದಲ್ಲಿ ಬದಲಾಯಿಸಲಾಗದ ಕ್ರಮಗಳನ್ನು ಕೈಗೊಳ್ಳಲು ಕೇಂದ್ರಕ್ಕೆ ಅಧಿಕಾರವಿಲ್ಲ ಎಂಬ ಅರ್ಜಿದಾರರ ವಾದವನ್ನು ಒಪ್ಪಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ರಾಷ್ಟ್ರಪತಿ ಆಡಳಿತವಿರುವಂತಹ ಸಂದರ್ಭದಲ್ಲಿ ಕೇಂದ್ರವು ರಾಜ್ಯವೊಂದರ ಪರವಾಗಿ ಕೈಗೊಳ್ಳುವ ಪ್ರತಿಯೊಂದು ಕ್ರಮವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಕೂಡ ಹೇಳಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಡಳಿತದ ಮಾನ್ಯತೆ ಕುರಿತಂತೆ ಏನನ್ನೂ ಹೇಳಲು ಸುಪ್ರೀಂ ಕೋರ್ಟ್ ನಿರಾಕರಿಸುತ್ತದೆ. ಅದರೆ ರಾಷ್ಟ್ರಪತಿ ಆಡಳಿತ ಹೇರಿದ ನಂತರ ಚಲಾಯಿಸಬಹುದಾದ ಅಧಿಕಾರಗಳಲ್ಲಿ ಕೆಲವೊಂದು ನಿಯಂತ್ರಣಗಳಿವೆ ಎಂದು ಅವರು ತಿಳಿಸಿದ್ದಾರೆ.