ಉಡುಪಿ: ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ.
ನಿನ್ನೆ ಸಂಜೆ ಮಲ್ಪೆ ಬೀಚ್ ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೋಟ್ ಸಿಬ್ಬಂದಿ ಬೀಚ್ ನಲ್ಲಿಯೇ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸುವ ಮೂಲಕ ಅನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ.
ಹಲ್ಲೆಕೋರರಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ಹರಸಾಹಸಪಟ್ಟರು. ಹಲ್ಲೆಯಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು. ಆದರೆ ಬೆಂಬಿಡದ ಸಿಬ್ಬಂದಿ ಅಟ್ಟಾಸಿಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿದ್ದಾರೆ. ಸಾವಿರಾರು ಪ್ರವಾಸಿಗರ ಮಧ್ಯೆಯೇ ಅನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ಹಲ್ಲೆಯ ಭಯಾನಕ ದೃಶ್ಯ ಬೀಚ್ ನಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.