ಮುಂಬೈ: ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ನಾಯಕರಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನೇಮಕ ಮಾಡಲಾಗಿದೆ.
ಮುಂಬೈ ಇಂಡಿಯನ್ಸ್ ತಂಡದ ಯಶಸ್ವಿ ನಾಯಕ ರೋಹಿತ್ ಶರ್ಮಾ ಅವರ ಸ್ಥಾನಕ್ಕೆ ಆಲ್ರೌಂಡರ್ ಹಾರ್ದಿಕ್ ಆಯ್ಕೆಯಾಗಿದ್ದಾರೆ.
ಈ ಕುರಿತು ಮುಂಬೈ ಇಂಡಿಯನ್ಸ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2024ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮುಂಬೈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎಂದು ಹೇಳಿದೆ.