ಉಡುಪಿ: ಅಜೆಕಾರು ಸಮೀಪದ ಎಣ್ಣೆಹೊಳೆ ಸೇತುವೆಯ ಕೆಳಭಾಗದಲ್ಲಿ ನದಿಯ ದಡದ ಬಳಿ ಬುಧವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರು ನೀಲಿ ಬಣ್ಣದ ಉದ್ದನೆಯ ಗೆರೆಗಳಿರುವ ಶರ್ಟ್, ಬಿಳಿ ಮಿಶ್ರಿತ ಹಳದಿ ಬಣ್ಣದ ಪ್ಯಾಂಟ್ ಹಾಗೂ ನೀಲಿ ಬಣ್ಣದ ಶೂ ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಈ ಕುರಿತು ಯಾವುದೇ ಮಾಹಿತಿ ಇದ್ದಲ್ಲಿ ಅಜೆಕಾರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಕಾರ್ಕಳ: ಎಣ್ಣೆಹೊಳೆ ಸೇತುವೆ ಬಳಿ ವ್ಯಕ್ತಿಯ ಮೃತದೇಹ ಪತ್ತೆ

