Friday, October 16, 2026

ಕರ್ನಾಟಕದ 20ನೇ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

Must read

ಬೆಂಗಳೂರು: ಕರ್ನಾಟಕದ 20ನೇ ರಾಜ್ಯಪಾಲರಾಗಿ ಸುಧಾ ಯಾದವ್ ಅವರು ಶುಕ್ರವಾರ (ಅ.16) ಬೆಂಗಳೂರಿನ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಅವರು ಪ್ರಮಾಣವಚನ ಬೋಧಿಸಿದರು.
ವಿ.ಎಸ್. ರಮಾದೇವಿ ಅವರ ಬಳಿಕ ಕರ್ನಾಟಕದ ರಾಜ್ಯಪಾಲ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಸುಧಾ ಯಾದವ್ ಪಾತ್ರರಾಗಿದ್ದಾರೆ.
ಹರಿಯಾಣ ಮೂಲದ ಸುಧಾ ಯಾದವ್ ಅವರು ಬಿಜೆಪಿಯ ಹಿರಿಯ ನಾಯಕಿಯಾಗಿದ್ದು, ಪಕ್ಷದಲ್ಲಿ ವಿವಿಧ ಸಾಂಸ್ಥಿಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. 1999ರಿಂದ 2004ರವರೆಗೆ ಮಹೇಂದ್ರಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಬಳಿಕ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾದ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸಿದ್ದರು.

spot_img

More articles

LEAVE A REPLY

Please enter your comment!
Please enter your name here