Thursday, October 22, 2026

ಅ. 22ರಂದು ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

Must read

ಮಂಗಳೂರು: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ಅ.22ರ ಗುರುವಾರ ರಜೆ ಎಂದು ಶೀಘ್ರವೇ ಘೋಷಣೆಯಾಗಲಿದೆ.
ನವರಾತ್ರಿ ಉತ್ಸವದ ಕೊನೆಯ ದಿನದಂದು (ಅ.21) ತಡರಾತ್ರಿಯವರೆಗೆ ಕಾರ್ಯಕ್ರಮವಿರುವ ಕಾರಣ ವಿದ್ಯಾರ್ಥಿಗಳಿಗೆ ಮರುದಿನ (ಅ.22) ಶಾಲೆಗಳಿಗೆ ತೆರಳಲು ಸಮಸ್ಯೆಯಾಗಲಿದೆ. ಹಾಗಾಗಿ ಈ ಬಗ್ಗೆ ಪರಿಶೀಲಿಸಬೇಕು ಎಂದು ಸಾರ್ವಜನಿಕರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ರ ಗಮನ ಸೆಳೆದಿದ್ದರು.
ಆ ಹಿನ್ನೆಲೆಯಲ್ಲಿ ಈ ಬಗ್ಗೆ ಕ್ರಮ ಜರಗಿಸುವಂತೆ ಸಚಿವ ಖಾದರ್ ದ.ಕ.ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದರು. ಅದರಂತೆ ಅ.22ರ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಖಾಸಗಿ ಮತ್ತು ಸರಕಾರಿ ಶಾಲೆಗಳಿಗೆ ರಜೆ ಘೋಷಿಸಲು ಜಿಲ್ಲಾಧಿಕಾರಿ ನಿರ್ಧರಿಸುವುದಾಗಿ ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಶೀಘ್ರವೇ ಹೊರಬೀಳಲಿದೆ.

spot_img

More articles

LEAVE A REPLY

Please enter your comment!
Please enter your name here