Monday, October 26, 2026

ಕುಂದಾಪುರ: ಮಗಳ ಕೊಲೆಗೈದು ತಾಯಿ ಆತ್ಮಹತ್ಯೆ ಶರಣು!

Must read

ಉಡುಪಿ: ಕುಂದಾಪುರ ತಾಲೂಕಿನ ಶಾನಾಡಿ ಮದಗದ ಕೊರಗ ಕಾಲೋನಿಯಲ್ಲಿ ವಿಕಲಾಂಗ ಮಗಳನ್ನು ಕೊಲೆಗೈದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ನಡೆದಿದೆ.
ಶಾನಾಡಿ ನಿವಾಸಿ ಸುಧಾಕರ ಕೊರಗ ಅವರ ಪುತ್ರಿ ಸುಪ್ರತಿ (14) ಕೊಲೆಯಾದ ಬಾಲಕಿ. ಅವರ ಪತ್ನಿ ನೇತ್ರಾವತಿ (40) ಆತ್ಮಹತ್ಯೆ ಮಾಡಿಕೊಂಡವರು.
ಸುಧಾಕರ ಕೊರಗ ಅವರು ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದರು. ದಂಪತಿಯ ಪುತ್ರಿ ಸುಪ್ರತಿ ಹುಟ್ಟಿನಿಂದಲೇ ಅಂಗವಿಕಲೆಯಾಗಿದ್ದು, ನಡೆಯಲು ಹಾಗೂ ಕುಳಿತುಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಳು. ಮಗಳ ಆರೈಕೆಯನ್ನು ತಾಯಿ ನೇತ್ರಾವತಿ ಮಾಡುತ್ತಿದ್ದರು ಎನ್ನಲಾಗಿದೆ. ದಂಪತಿಗೆ ಒಂದು ವರ್ಷದ ಗಂಡು ಮಗುವೂ ಇದೆ.
ಭಾನುವಾರ ಸುಧಾಕರ ಅವರು ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ನೇತ್ರಾವತಿ ಕತ್ತಿಯಿಂದ ಮಗಳ ಕುತ್ತಿಗೆ ಸೀಳಿ ಕೊಲೆಗೈದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಪರಿಸ್ಥಿತಿ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಾಹಿತಿ ತಿಳಿದು ಕೋಟ ಪೊಲೀಸ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಎಎಸ್ಪಿ ಸುಧಾಕರ್, ಡಿವೈಎಸ್ಪಿ ಬೆಳ್ಳಿಯಪ್ಪ ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.
ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

spot_img

More articles

LEAVE A REPLY

Please enter your comment!
Please enter your name here