Wednesday, October 28, 2026

ಖರ್ಗೆ ವರ್ತನೆ ಕಾಂಗ್ರೆಸ್ ಅಧಃಪತನಕ್ಕೆ ನಾಂದಿ: ಕುತ್ಯಾರು ನವೀನ್ ಶೆಟ್ಟಿ

Must read

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಳಸಿರುವ ಆಕ್ಷೇಪಾರ್ಹ ಪದಪ್ರಯೋಗ ಖಂಡನೀಯ. ಖರ್ಗೆ ಅವರ ಬೇಜವಾಬ್ದಾರಿಯುತ ವರ್ತನೆ ಕಾಂಗ್ರೆಸ್ ಪಕ್ಷದ ಅಧಃಪತನಕ್ಕೆ ನಾಂದಿ ಹಾಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆರೋಪಿಸಿದ್ದಾರೆ.
ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿ ಅವರ ಕುರಿತು ಖರ್ಗೆ ಅವರು ಬಳಸಿದ ಭಾಷೆ ಖಂಡನೀಯ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಓಲೈಸುವ ಉದ್ದೇಶದಿಂದ ಖರ್ಗೆ ಅವರು ಪ್ರಧಾನಿ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿದ್ದಾರೆ. ದೇಶದ ಪ್ರಧಾನಿಯ ಬಗ್ಗೆ ಇಂತಹ ಹೇಳಿಕೆ ನೀಡಿರುವುದು ಅಸಹ್ಯಕರ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಾಗತಿಕ ಮಟ್ಟದಲ್ಲಿ ಭಾರತ ಪ್ರಭಾವಶಾಲಿ ರಾಷ್ಟ್ರವಾಗಿ ಗುರುತಿಸಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ದಿನೇದಿನೇ ಹೆಚ್ಚುತ್ತಿದೆ. ಇದನ್ನು ಸಹಿಸಲಾಗದೆ ಕಾಂಗ್ರೆಸ್ ನಾಯಕರು ಹತಾಶೆಯಿಂದ ವರ್ತಿಸುತ್ತಿದ್ದಾರೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿಯನ್ನು ಅವಮಾನಿಸಿರುವ ಖರ್ಗೆ ಅವರು ದೇಶದ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಪ್ರಧಾನಿ ಮೋದಿ ಅವರನ್ನು ವೈಯಕ್ತಿಕವಾಗಿ ಟೀಕಿಸುವುದು, ಅವರ ಕುಟುಂಬದವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದು ಕಾಂಗ್ರೆಸ್ ನಾಯಕರ ಪ್ರವೃತ್ತಿಯಾಗಿದೆ ಎಂದು ಆರೋಪಿಸಿದ ನವೀನ್ ಶೆಟ್ಟಿ, ಕಾಂಗ್ರೆಸ್‌ನ ಇಂತಹ ವರ್ತನೆಯನ್ನು ದೇಶದ ಜನರು ಗಮನಿಸುತ್ತಿದ್ದು, ಮುಂದಿನ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here