ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆ ಶಾಕ್ ನೀಡಿದ್ದು, ನಂದಿನ ಹಾಲಿನ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ನಿರ್ಧರಿಸಲಾಗಿದೆ.
ಹೆಚ್ಚಿಗೆ ಮಾಡಲಾಗುವ 8 ರೂಪಾಯಿಯಲ್ಲಿ 7 ರೂಪಾಯಿ ಹಾಲು ಉತ್ಪಾದಕರಿಗೆ ಮತ್ತು 1 ರೂಪಾಯಿ ಕೆಎಂಎಫ್ ಗೆ ನೀಡಲಾಗುವುದು ಮತ್ತು ಪರಿಷ್ಕೃತ ದರ ನವೆಂಬರ್ 1 ರಿಂದಲೇ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.
ಕಳೆದ ಸಚಿವ ಸಂಪುಟ ಸಭೆಯಲ್ಲಿ ನಂದಿನ ಹಾಲಿನ ದರ ಏರಿಕೆಗೆ ಒಪ್ಪಿಗೆ ನೀಡಲಾಗಿತ್ತು. ಆದರೆ ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿತ್ತು. ಇದೀಗ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನತೆಗೆ ದರ ಏರಿಕೆ ಶಾಕ್ ನೀಡಲಾಗಿದೆ.
ನಂದಿನ ಹಾಲಿನ ದರ ಲೀಟರ್‌ಗೆ ಬರೋಬ್ಬರಿ 8 ರೂ. ಹೆಚ್ಚಳ; ನವೆಂಬರ್ 1 ರಿಂದಲೇ ಜಾರಿ!

